ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ಪ್ರವಾಹ: 132 ಮಂದಿ ಸಾವು, ಸಂಕಷ್ಟದಲ್ಲಿ ಹಲವು ಕುಟುಂಬಗಳು 

Last Updated 24 ಜುಲೈ 2020, 7:27 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು,132 ಮಂದಿ ಸಾವಿಗೀಡಾಗಿದ್ದು, 53 ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಹದಲ್ಲಿ ಸಿಲುಕಿ 128 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವೆಡೆ ಮನೆಗಳು ಕೊಚ್ಚಿಹೋಗಿದ್ದು, 998 ಕುಟುಂಬಗಳು ಹಾನಿಗೊಳಗಾಗಿವೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಭೂಕುಸಿತದಿಂದಾಗಿ ಪಶ್ಚಿಮ ನೇಪಾಳದ ಪೃಥ್ವಿ, ಸಿದ್ಧಾರ್ಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸ್ಥಳೀಯರ ಸಹಾಯದಿಂದ ನೇಪಾಳ ಪೊಲೀಸರು ಮತ್ತುನೇಪಾಳ ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ‌ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ನಡೆಸಲು ಹತ್ತು ಸೇನಾ ಹೆಲಿಕಾಪ್ಟರ್‌ಗಳನ್ನು ಕಠ್ಮಂಡು, ಪೋಖರಾ, ಸಾರಂಗ್‌ಕೋಟ್‌ನಲ್ಲಿ ನಿಯೋಜಿಸಲಾಗಿದೆ. ಭೂಕುಸಿತ ಮತ್ತು ಪ್ರವಾಹದಿಂದಾಗಿ ಇಪ್ಪತ್ತು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT