ಶುಕ್ರವಾರ, ಸೆಪ್ಟೆಂಬರ್ 17, 2021
30 °C

ನೇಪಾಳದಲ್ಲಿ ಭೂಕುಸಿತ: 12 ಮಂದಿ ಸಾವು, 19 ಮಂದಿ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Landslide

ಕಠ್ಮಂಡು: ನೇಪಾಳದ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದು, 19 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. 

ಕಸ್ಕಿ ಜಿಲ್ಲೆಯ ಪೋಖರಾ ನಗರದ ಸಾರಂಗ್‌ಕೋಟ್ ಮತ್ತು ಹೆಮ್ಜನ್ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.

ಗುರುವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ ಲ್ಯಾಮ್‌ಜಂಗ್ ಜಿಲ್ಲೆಯ ಬೇಸಿಶಹರ್‌ನಲ್ಲಿನ ಕುಟುಂಬವೊಂದರ ಮೂವರು ಸದಸ್ಯರು ಹಾಗೂ ರುಕುಂ ಜಿಲ್ಲೆಯ ಆಥ್‌ಬಿಸ್ಕೊಟ್ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.  

ಈ ನಡುವೆ ಜರ್ಜೊರ್‌ಕೋಟ್ ಜಿಲ್ಲೆಯಲ್ಲಿ ಭೂಕುಸಿತದಿಂದ ಎರಡು ಮನೆಗಳು ಹಾನಿಗೀಡಾಗಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮ್ಯಾಗ್ಡಿ ಜಿಲ್ಲೆಯಲ್ಲೂ ಭೂಕುಸಿತದಿಂದ 7 ಮಂದಿ ನಾಪತ್ತೆಯಾಗಿದ್ದಾರೆ. 

ಜೋಗಿಮರ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಪಶ್ಚಿಮ ನೇಪಾಳದ ಪೃಥ್ವಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ನಿರಂತರ ಮಳೆಯಾಗುತ್ತಿರುವ ಕಾರಣ, ನಾರಾಯಣಿ ಸೇರಿದಂತೆ ಇತರ ಪ್ರಮುಖನದಿಗಳು ಉಕ್ಕಿ ಹರಿಯುತ್ತಿವೆ.

ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು