ಗುರುವಾರ , ಜುಲೈ 29, 2021
21 °C

ದಕ್ಷಿಣ ಕೆರೊಲಿನಾ ನೈಟ್ ಕ್ಲಬ್‌ನಲ್ಲಿ ಗುಂಡಿನ ದಾಳಿ: 12 ಮಂದಿಗೆ ಗಾಯ

ಎಪಿ Updated:

ಅಕ್ಷರ ಗಾತ್ರ : | |

crime scene

ಗ್ರೀನ್‌ವಿಲೆ : ಇಲ್ಲಿನ ಐಷಾರಾಮಿ ನೈಟ್‌ಕ್ಲಬ್‌ ಒಂದರಲ್ಲಿ ಭಾನುವಾರ ನಸುಕಿನ 2 ಗಂಟೆ ಸುಮಾರಿಗೆ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡಿರುವವರ ವಿವರ ಹಾಗೂ ದಾಳಿಗೆ ಸಂಬಂಧಿಸದಂತೆ ಯಾರನ್ನಾದರೂ ಬಂಧಿಸಲಾಗಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ಜುಲೈ 4ರಂದು ಈ ಕ್ಲಬ್‌ನಲ್ಲಿ ರ್‍ಯಾಪರ್‌ ಫೂಗಿಯಾನೋ ಅವರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಈ ಕ್ಲಬ್‌ನ ಫೆಸ್‌ಬುಕ್‌ ಪುಟದಲ್ಲಿ ಜಾಹೀರಾತು ಪ್ರಕಟಿಸಲಾಗಿತ್ತು. ಆದರೆ ಆ ಜಾಹೀರಾತಿನಲ್ಲಿ ನೀಡಲಾಗಿದ್ದ ದೂರವಾಣಿಗೆ ಮಾಡಿರುವ ಕರೆಯನ್ನು ಯಾರೂ ಸ್ವೀಕರಿಸುತ್ತಿರಲಿಲ್ಲ ಎಂದು ವರದಿ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು