ಭಾನುವಾರ, ಜೂಲೈ 5, 2020
22 °C

ಶ್ರೀಲಂಕಾ | ಕೋವಿಡ್–19 ಸೋಂಕು ಭೀತಿ: ಅಂ.ರಾ ವಿಮಾನ ಸೇವೆ ಇನ್ನಷ್ಟು ವಿಳಂಬ ಸಂಭವ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಶ್ರೀಲಂಕಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೇವೆ ಪುನರಾರಂಭಿಸುವುದನ್ನು ಇನ್ನಷ್ಟು ವಿಳಂಬ ಮಾಡುವ ಸಂಭವವಿದೆ. ಈ ಮೊದಲು ಆಗಸ್ಟ್ 1ರಿಂದ ಪುನರಾರಂಭಿಸಲು ತೀರ್ಮಾನಿಸಲಾಗಿತ್ತು.

ಕೊರೊನಾ ಪಿಡುಗು ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದಾಗಿ ವಿದೇಶಗಳಲ್ಲಿ ಅತಂತ್ರರಾಗಿರುವ ದೇಶೀಯ ಪ್ರಜೆಗಳನ್ನು ಕರೆತರಲು ತಾನು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಶ್ರೀಲಂಕಾ ಸರ್ಕಾರ ತಿಳಿಸಿದೆ.

ಶ್ರೀಲಂಕಾ ವಿಮಾನನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ನಿವೃತ್ತ ಮೇಜರ್‌ ಜನರಲ್‌ ಜಿ.ಎ.ಚಂದ್ರಸಿರಿ ಅವರು, ಆಗಸ್ಟ್‌ 1 ರಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು