ಮಂಗಳವಾರ, ಆಗಸ್ಟ್ 3, 2021
21 °C

ಕಾಬೂಲ್‌ | ಆತ್ಮಾಹುತಿ ಬಾಂಬ್‌ ದಾಳಿ: 6 ಪೊಲೀಸರ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಆಫ್ಗಾನಿಸ್ಥಾನದಲ್ಲಿ ಬುಧವಾರ ಎರಡು ಕಡೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು ಆರು ಮಂದಿ ಪೊಲೀಸರು ಸಾವಿಗೀಡಾಗಿದ್ದಾರೆ.

ಕಂದಹಾರ್‌ನ ದಕ್ಷಿಣ ಪ್ರಾಂತ್ಯದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್‌ ಕೇಂದ್ರ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಟ್ರಕ್‌ನಲ್ಲಿ ಬಂದಿದ್ದ ದಾಳಿಕೋರನು ಕಚೇರಿ ಸಮೀಪ ಸ್ಫೋಟಿಸಿಕೊಂಡಿದ್ದಾನೆ.

ಘಜನಿಯ ಪೂರ್ವ ಪ್ರಾಂತ್ಯದಲ್ಲಿ ರಸ್ತೆ ಬದಿ ನಡೆದ ಮತ್ತೊಂದು ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ. 

ತಾಲಿಬಾನ್,‌ ಎರಡೂ ದಾಳಿಗಳ ಹೊಣೆ ಹೊತ್ತುಕೊಂಡಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು