ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ಗಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಹೆಚ್ಚಿದ ದಾಳಿ

Last Updated 28 ಜುಲೈ 2020, 8:29 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಪ್ರಸಕ್ತ ವರ್ಷದ ಮೊದಲ ಆರು ತಿಂಗಳೊಳಗೆ ಅಪ್ಗಾನಿಸ್ತಾನದಲ್ಲಿ ಸಿಖ್ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಇಸ್ಲಾಮಿಕ್ ಉಗ್ರರು ನಡೆಸಿರುವ ದಾಳಿಯಲ್ಲಿ 3,458 ಸಾವು–ನೋವಿನ ಘಟನೆಗಳು ನಡೆದಿವೆ.

ಅಪ್ಗಾನಿಸ್ತಾನದಲ್ಲಿರುವ ವಿಶ್ವಸಂಸ್ಥೆಯ ನೆರವು ಯೋಜನೆ ಬಿಡುಗಡೆ ಮಾಡಿದ ಅರ್ಧವಾರ್ಷಿಕ ವರದಿಯ ಪ್ರಕಾರ, ಅಪ್ಗಾನಿಸ್ತಾನದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್‌ ಇರಾಕ್ – ಲೆವಾಂತ್‌– ಖೊರಾಸನ್ ಪ್ರಾಂತ್ಯದಲ್ಲಿರುವ(ಐಎಸ್‌ಐಎಲ್‌–ಕೆಪಿ) ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಈ ಪ್ರಾಂತ್ಯದಲ್ಲಿ ಸಿಖ್ ಸೇರಿದಂತೆ ಶಿಯಾ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಹೆಚ್ಚಾಗಿ ವಾಸಿಸುತ್ತಾರೆ. ಸಿಖ್ ಸಮುದಾಯ ಸೇರಿದಂತೆ, ವಿವಿಧ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದಿದ್ದು, ಅದರಲ್ಲಿ 1282 ಮಂದಿ ಹತ್ಯೆಯಾಗಿದ್ದಾರೆ. 2176 ಮಂದಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT