ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ | ಎಚ್ಚರ ವಹಿಸದಿದ್ದರೆ ನಿತ್ಯ 1 ಲಕ್ಷ ಸೋಂಕು ಪ್ರಕರಣ; ಆಂಥೊನಿ ಫೌಸಿ

Last Updated 1 ಜುಲೈ 2020, 2:36 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಭಾವ ಮತ್ತೆ ವ್ಯಾಪಿಸಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟಿದ್ದ 1,199 ಮಂದಿ ಮೃತಪಟ್ಟಿರುವುದು ಜಾನ್ಸ್‌ ಹಾಪ್‌ಕಿನ್ಸ್‌ ಯೂನಿವರ್ಸಿಟಿ ಮಾಹಿತಿಯಿಂದ ತಿಳಿದು ಬಂದಿದೆ.

ಇಳಿಮುಖವಾಗಿದ್ದ ಸೋಂಕು ಪ್ರಕರಣ ಹಾಗೂ ಸಾವಿನ ಸಂಖ್ಯೆ ಇದೀಗ ದಿಢೀರ್ ಏರಿಕೆಯಾಗಿದೆ. ಜೂನ್‌ 10ರಿಂದ ಸೋಂಕಿನಿಂದಾಗಿ ಸಾವಿಗೀಡಾದವರ ಸಂಖ್ಯೆ 1,000 ದಾಟಿರಲಿಲ್ಲ.

ಮಂಗಳವಾರ ಅಮೆರಿಕದಲ್ಲಿ 42,528 ಹೊಸ ಪ್ರಕರಣಗಳು ದಾಖಲಾಗಿವೆ. ರಾಯಿಟರ್ಸ್‌ ಲೆಕ್ಕದ ಪ್ರಕಾರ, 47,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೂ ಸೋಂಕಿನಿಂದ 1,27,322 ಜನ ಮೃತಪಟ್ಟಿದ್ದಾರೆ. ಪ್ರರಕಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುವುದರಿಂದ ಹಿಂದೆ ಸರಿಯಲಾಗಿದೆ.

ಟೆಕ್ಸಾಸ್‌ನಲ್ಲಿ ಒಂದೇ ದಿನ 6,975 ಕೋವಿಡ್‌–19 ಹೊಸ ಪ್ರಕರಣಗಳು ವರದಿಯಾಗಿವೆ. ಕ್ಯಾಲಿಫೋರ್ನಿಯಾದ ಸ್ಯಾನ್‌ ಕ್ವೆಂಟಿನ್‌ ಜೈಲಿನಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

'ಸೋಂಕು ಸಾಂಕ್ರಾಮಿಕವಾಗುತ್ತಿರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮವಹಿಸದಿದ್ದರೆ, ನಿತ್ಯ ಸೋಂಕು ಪ್ರಕರಣಗಳ ಸಂಖ್ಯೆ 1,00,000 ದಾಟ ಬಹುದು. ಪ್ರಸ್ತುತ ನಾವು ಸಂಪೂರ್ಣ ನಿಯಂತ್ರಣ ಹೊಂದಿಲ್ಲ. ಯುವಜನತೆ ಸೇರಿದಂತೆ ಎಲ್ಲರೂ ಮಾಸ್ಕ್‌ ಧರಿಸಬೇಕು ಹಾಗೂ ಜನದಟ್ಟಣೆಯಿಂದ ಅಂತರ ಕಾಯ್ದುಕೊಳ್ಳಬೇಕು' ಎಂದು ಕೊರೊನಾ ನಿಯಂತ್ರಣ ಕಾರ್ಯಪಡೆಯ ನೇತೃತ್ವ ವಹಿಸಿರುವ ಡಾ.ಆಂಥೊನಿ ಫೌಸಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT