ಶುಕ್ರವಾರ, ಆಗಸ್ಟ್ 6, 2021
25 °C

ಭಯೋತ್ಪಾದನೆ ಶಮನಕ್ಕೆ ಅಮೆರಿಕ- ಭಾರತ ಜಂಟಿ ‍ಪ್ರಯತ್ನ: ಅಮೆರಿಕ ಸಂಸದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಭಯೋತ್ಪಾದನೆ ಶಮನಕ್ಕಾಗಿ ಅಮೆರಿಕ ಮತ್ತು ಭಾರತ ಜಂಟಿಯಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಅಮೆರಿಕದ ಸಂಸದರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ದೇಶದ ಸ್ನೇಹಿತರಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರು ಧನ್ಯವಾದ ಹೇಳಿದ್ದಾರೆ.

ಅಮೆರಿಕದ ಜನಪ್ರತಿನಿಧಿಗಳ ಸಭೆಯಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಸಂಸದ ಜಾನ್‌ ಕಾರ್ಟರ್‌, ಭಾರತ ಮತ್ತು ಅಮೆರಿಕ ಉತ್ತಮ ರಾಜತಾಂತ್ರಿಕ ಸಂಬಂಧವನ್ನೂ ಹೊಂದಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿ ಹೇಳುತ್ತಿವೆ ಎಂದಿದ್ದಾರೆ.

ಭಾರತ ಮತ್ತು ಅಮೆರಿಕ ದೇಶಗಳು ಭಯೋತ್ಪಾದನೆ ವಿರುದ್ಧ ಜೊತೆಯಾಗಿ ಹೋರಾಡುತ್ತಿವೆ. ಎರಡೂ ದೇಶಗಳು ಪರಸ್ಪರ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಫೆಬ್ರುವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದಾಗ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಭಾರತದ ಜನರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್‌ ಅವರು, ರಕ್ಷಣೆ, ಇಂಧನ, ವ್ಯಾಪಾರ ಕ್ಷೇತ್ರಗಳಲ್ಲಿ ನೆರವು ನೀಡುವುದರ ಜತೆಗೆ ಮಹಿಳಾ ಉದ್ಯಮಿಗಳ ಪ್ರಗತಿಗೆ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಕಾರ್ಟರ್‌ ಸ್ಮರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು