ವಿಜಯಪುರ: ಜಿ.ಪಂ. ಅಧ್ಯಕ್ಷೆ ನೀಲಮ್ಮ ಮೇಟಿ ಮನೆಯಲ್ಲಿ ಕಳ್ಳತನ

7

ವಿಜಯಪುರ: ಜಿ.ಪಂ. ಅಧ್ಯಕ್ಷೆ ನೀಲಮ್ಮ ಮೇಟಿ ಮನೆಯಲ್ಲಿ ಕಳ್ಳತನ

Published:
Updated:

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಅವರ ನಗರದ ಕನಕದಾಸ ಬಡಾವಣೆಯ ನಿವಾಸದಲ್ಲಿ ಕಳ್ಳತನ ನಡೆದಿದೆ.

ಗೋವಾಗೆ ತೆರಳಿದ್ದ ನೀಲಮ್ಮ ಮೇಟಿ, ಬುಧವಾರ ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಅತೀಕ್‌ ಅವರಿಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಗುರುವಾರ ನಸುಕಿನಲ್ಲಿ ಬೆಂಗಳೂರಿನಿಂದ ವಿಜಯಪುರದ ನಿವಾಸಕ್ಕೆ ಮರಳಿದಾಗ, ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

‘ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಮನೆಯಿಂದ ₹ 3 ಲಕ್ಷ ನಗದು, 150 ಗ್ರಾಂ ಚಿನ್ನಾಭರಣದ ಜತೆ ಮನೆಯ ಮುಂಭಾಗ ನಿಲ್ಲಿಸಿದ್ದ ಟೊಯೊಟಾ ಕಂಪನಿಯ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಖದೀಮರ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿದೆ. ಕಳ್ಳತನ ಮಾಡಿ, ಕಾರನ್ನು ಕದ್ದೊಯ್ದಿರುವುದು ಇದೇ ಮೊದಲ ಪ್ರಕರಣ. ಈ ಬಗ್ಗೆ ನೆರೆಯ ಮಹಾರಾಷ್ಟ್ರದ ಪೊಲೀಸರಿಗೂ ಮಾಹಿತಿ ನೀಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ ಅಮೃತ್‌ ನಿಕ್ಕಂ ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !