ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನಾನದ ಕೊಠಡಿಗೆ ಇಣುಕಿ ನೋಡುತ್ತಿದ್ದವ ಬಂಧನ

ಮಹಿಳೆಯಿಂದ ಪೊಲೀಸರಿಗೆ ದೂರು
Last Updated 20 ಆಗಸ್ಟ್ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದದ್ದನ್ನು ಇಣುಕಿ ನೋಡುತ್ತಿದ್ದ ಆರೋಪಿ ಪ್ರದೀಪ್ ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

‘ಸಂತ್ರಸ್ತ ಮಹಿಳೆ ನೀಡಿರುವ ದೂರಿನಡಿ ಆರೋಪಿ ವಿರುದ್ಧ ಎಫ್‌ಐ ಆರ್ ದಾಖಲಿಸಿಕೊಳ್ಳಲಾಗಿದೆ. ಆತ, ಕಾಳೇನ ಅಗ್ರಹಾರದ ನಿವಾಸಿ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಮಹಿಳೆ ಕುಟುಂಬ ಸಮೇತ ವಾಸವಿದ್ದಾರೆ. ಇದೇ 18ರಂದು ಸಂಜೆ ಅವರು ಮನೆಯಲ್ಲಿ ಸ್ನಾನ ಮಾಡುತ್ತಿದ್ದರು. ಅದೇ ವೇಳೆ ಆರೋಪಿ ಸ್ನಾನದ ಕೊಠಡಿಯ ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದ.’

‘ಆತನನ್ನು ನೋಡಿದ್ದ ಮಹಿಳೆ, ಕಿರುಚಾಡಿದ್ದರು. ಆತ, ಸ್ಥಳದಿಂದ ಓಡಲಾರಂಭಿಸಿದ್ದ. ಸ್ಥಳೀಯ ನಿವಾಸಿಗಳು ಆತನನ್ನು ಬೆನ್ನಟ್ಟಿ ಹಿಡಿದಿದ್ದರು’ ಎಂದು ಪೊಲೀಸರು ಹೇಳಿದರು. ‘ಸ್ಥಳಕ್ಕೆ ಹೋದ ಹೊಯ್ಸಳ ಗಸ್ತು ವಾಹನ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಆತ ತಪ್ಪೊಪ್ಪಿಕೊಂಡ’ ಎಂದು ಪೊಲೀಸರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT