500 ಕಡೆ ರಾಜಕಾಲುವೆ ಒತ್ತುವರಿ ತೆರವು

ಶುಕ್ರವಾರ, ಏಪ್ರಿಲ್ 26, 2019
36 °C

500 ಕಡೆ ರಾಜಕಾಲುವೆ ಒತ್ತುವರಿ ತೆರವು

Published:
Updated:

ಬೆಂಗಳೂರು: ‘ನಗರದ ವಿವಿಧೆಡೆ 500 ಕಡೆ ಒತ್ತುವರಿಯಾಗಿದ್ದ ರಾಜಕಾಲುವೆ ಜಾಗವನ್ನು ತೆರವುಗೊಳಿಸಲಾಗಿದೆ’ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ‘ಸಿಟಿಜನ್ ಆಕ್ಷನ್ ಗ್ರೂಪ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ರಾಜಕಾಲುವೆ ಒತ್ತುವರಿ ತೆರವಿನ ಕುರಿತ ವಸ್ತುಸ್ಥಿತಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

‘ಅನೇಕ ಕಡೆ ಒತ್ತುವರಿಯಾಗಿರುವ ಮಳೆನೀರು ಕಾಲುವೆಯ ಜಾಗವು ಸರ್ಕಾರದ ಸ್ವತ್ತಾಗಿದೆ. ಹೀಗಾಗಿ, ಒತ್ತುವರಿಯಾಗಿರುವ ಜಾಗವನ್ನು ಸರ್ಕಾರ ಗುರುತಿಸಿ ಅದರ ಪಟ್ಟಿ ನೀಡಿದರೆ, ಬಿಬಿಎಂಪಿ ವತಿಯಿಂದ ತೆರವುಗೊಳಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಪೀಠ, ‘ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರದ ಸ್ವತ್ತಿನಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ ಜಾಗದ ಸರ್ವೇ ನಡೆಸಿ ಅದರ ಮಾಹಿತಿಯನ್ನು ಪಾಲಿಕೆಗೆ ನೀಡುವಂತೆ ಸರ್ವೇ ಇಲಾಖೆಗೆ ನಿರ್ದೇಶಿಸಿತು. ಸರ್ವೇ ಇಲಾಖೆ ನೀಡುವ ಮಾಹಿತಿ ಆಧರಿಸಿ ಒತ್ತುವರಿ ತೆರವು ಕಾರ್ಯಚರಣೆ ನಡೆಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶಿಸಿತು.

‘ಈ ಕುರಿತು ವರದಿಯನ್ನು ಕೋರ್ಟ್‌ಗೆ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ ಎರಡನೇ ವಾರಕ್ಕೆ ಮುಂದೂಡಿತು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !