ಮುಷ್ಕರ: ಶಾಲಾ–ಕಾಲೇಜುಗಳಿಗೆ ರಜೆಯಿಲ್ಲ

7

ಮುಷ್ಕರ: ಶಾಲಾ–ಕಾಲೇಜುಗಳಿಗೆ ರಜೆಯಿಲ್ಲ

Published:
Updated:

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಇದೇ 8, 9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದು, ಜಿಲ್ಲೆಯಲ್ಲಿನ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕಾರ್ಮಿಕ ಸಂಘಟನೆಗಳು ನಗರದ ಆರಾಧ್ಯದೈವ ಸಿದ್ಧೇಶ್ವರ ದೇಗುಲದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ಇದೇ ಸಂದರ್ಭ ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ಜನ ಸಮಾವೇಶ ನಡೆಸಲಿವೆ.

ಮುಷ್ಕರದ ಹಿನ್ನೆಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಮಂಗಳವಾರ ಮುಂಜಾನೆಯ ಪರಿಸ್ಥಿತಿ ಅವಲೋಕಿಸಿ, ವಾಹನಗಳನ್ನು ರಸ್ತೆಗಿಳಿಸುವುದಾಗಿ ಈಶಾನ್ಯ ಕರ್ನಾಟಕ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಮೂಲಗಳು ತಿಳಿಸಿವೆ.

ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಕೇಂದ್ರ ಸಮಿತಿಯ ನಿರ್ಣಯ ಪಾಲಿಸುವುದಾಗಿ ತಿಳಿಸಿವೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !