ವಿದ್ಯಾರ್ಥಿ ಷೂ ಪರಿಶೀಲಿಸಿದ ಸಚಿವ ಮಹೇಶ್‌

7

ವಿದ್ಯಾರ್ಥಿ ಷೂ ಪರಿಶೀಲಿಸಿದ ಸಚಿವ ಮಹೇಶ್‌

Published:
Updated:
Deccan Herald

ಕೊಳ್ಳೇಗಾಲ: ನಗರದ ಎಂ.ಜಿ.ಎಸ್.ವಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಸಂಜೆ ದಿಢೀರ್‌ ಭೇಟಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ವಿದ್ಯಾರ್ಥಿಗಳಿಗೆ ನೀಡಿರುವ ಷೂಗಳ ಗುಣಮಟ್ಟ ಪರಿಶೀಲಿಸಿದರು.

ಶಾಲೆಯಲ್ಲಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದ ಬಳಿಕ, ವಿದ್ಯಾರ್ಥಿಯೊಬ್ಬನ ಷೂ ಬಿಚ್ಚಿಸಿದ್ದಾರೆ. ಅದನ್ನು ತೆಗೆದುಕೊಂಡು ಗುಣಮಟ್ಟ ಹೇಗಿದೆ ಎಂಬುದನ್ನು ಗಮನಿಸಿದ್ದಾರೆ. ಮಕ್ಕಳಿಂದಲೂ ಮಾಹಿತಿ ಪಡೆದಿದ್ದಾರೆ.

‘ನಾನು ಇದೆ ಶಾಲೆಯಲ್ಲಿ ಓದಿದ್ದೇನೆ. ಹೀಗಾಗಿ, ಶಾಲೆಯನ್ನು ದತ್ತು ಪಡೆದುಕೊಂಡಿದ್ದೇನೆ. ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಾಲಾ ಆವರಣದಲ್ಲಿ ನೈರ್ಮಲ್ಯ ಕಾಪಾಡಬೇಕು’ ಎಂದು ಶಿಕ್ಷಕರಿಗೆ ಸೂಚಿಸಿದರು.

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !