ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

7

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Published:
Updated:

ಬೆಂಗಳೂರು: ಕೆ.ಪಿ.ಅಗ್ರಹಾರ ಸಮೀಪದ ಭುವನೇಶ್ವರಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸುಷ್ಮಿತಾ (16) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾಲು ವ್ಯಾಪಾರಿ ಬಸವರಾಜು ಅವರ ಮಗಳಾದ ಸುಷ್ಮಿತಾ, ಮನೆ ಸಮೀಪದ ಸಿದ್ಧಲಿಂಗೇಶ್ವರ ಶಾಲೆಯಲ್ಲಿ ಓದುತ್ತಿದ್ದಳು. ತಂದೆ ಹಾಲು ಮಾರಲು ತೆರಳುತ್ತಿದ್ದಂತೆಯೇ ಮೊದಲ ಮಹಡಿಯ ಕೋಣೆಗೆ ತೆರಳಿ ನೇಣು ಹಾಕಿಕೊಂಡಿದ್ದಾಳೆ.

10 ಗಂಟೆ ಸುಮಾರಿಗೆ ತಾಯಿ ಆ ಕೋಣೆಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

‘ಮಗಳು ಚೆನ್ನಾಗಿ ಓದುತ್ತಿದ್ದಳು. ಒಂದು ದಿನವೂ ತರಗತಿ ತಪ್ಪಿಸಿಕೊಂಡವಳಲ್ಲ. ಆದರೆ, ನಾಲ್ಕೈದು ದಿನಗಳಿಂದ ಮಂಕಾಗಿದ್ದಳು’ ಎಂದು ಪೋಷಕರು ಹೇಳಿಕೆ ಕೊಟ್ಟಿರುವುದಾಗಿ ಪೊಲೀಸರು ಹೇಳಿದರು.

Tags: 

ಬರಹ ಇಷ್ಟವಾಯಿತೆ?

  • 7

    Happy
  • 3

    Amused
  • 1

    Sad
  • 2

    Frustrated
  • 3

    Angry

Comments:

0 comments

Write the first review for this !