3

ಕತ್ತು ಕೊಯ್ದುಕೊಂಡು ಟೈಲರ್ ಆತ್ಮಹತ್ಯೆ

Published:
Updated:

ಬೆಂಗಳೂರು: ವೈಯಾಲಿಕಾವಲ್ ಬಳಿಯ ಮುನೇಶ್ವರ ಬ್ಲಾಕ್‌ನಲ್ಲಿ ಮಂಜುನಾಥ್ (53) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮಿಳುನಾಡಿನ ಅವರು, ಹಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದಿದ್ದರು. ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಮಕ್ಕಳನ್ನು ತೊರೆದು ಒಬ್ಬಂಟಿಯಾಗಿ ನೆಲೆಸಿದ್ದರು ಎಂದು ವೈಯಾಲಿಕಾವಲ್ ಪೊಲೀಸರು ತಿಳಿಸಿದರು.

ಬುಧವಾರ ರಾತ್ರಿ ಮನೆಯೊಳಗೆ ಹೋಗಿದ್ದ ಅವರು, ಗುರುವಾರ ಮಧ್ಯಾಹ್ನವಾದರೂ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು, ಮನೆಯ ಕಿಟಕಿಯಲ್ಲಿ ನೋಡಿದಾಗಲೇ ವಿಷಯ ಗೊತ್ತಾಗಿದೆ ಎಂದು ಹೇಳಿದರು.

ಮೊದಲಿಗೆ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡಿರುವ ಮಂಜುನಾಥ್‌, ಆನಂತರ ಹೊಲಿಗೆ ಯಂತ್ರದ ಬೆಲ್ಟ್‌ನಿಂದ ನೇಣು ಹಾಕಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ಗೊತ್ತಾಗಿಲ್ಲ ಎಂದು ಪೊಲೀಸರು ವಿವರಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !