ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣ: ಮೂವರು ವಶಕ್ಕೆ

ಶನಿವಾರ, ಮಾರ್ಚ್ 23, 2019
34 °C
ಹೈಕೋರ್ಟ್‌ಗೆ ಎಎಜಿ ಹೇಳಿಕೆ

ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣ: ಮೂವರು ವಶಕ್ಕೆ

Published:
Updated:
Prajavani

ಬೆಂಗಳೂರು: ‘ನಗರದ ವಕೀಲೆ ಎಸ್‌.ಧರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಪ್ರಗತಿ ವಿವರಗಳನ್ನು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ದಿನೇಶ್‌ ರಾವ್‌ ಹೈಕೋರ್ಟ್‌ಗೆ ಸಲ್ಲಿಸಿದರು.

ಈ ಕುರಿತಂತೆ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರಮಾಣಪತ್ರಕ್ಕೆ ತೃಪ್ತವಾಗದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು ಒಳಗೊಂಡ ಕೇಸ್ ಡೈರಿಯನ್ನು ಕೋರ್ಟ್‌ಗೆ ಸಲ್ಲಿಸಿ’ ಎಂದು ಸಿಐಡಿ ಡಿಜಿಪಿಗೆ ಆದೇಶಿಸಿ, ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.

ಪ್ರಮಾಣ ಪತ್ರದಲ್ಲಿ ಏನಿದೆ?: ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಕೆಲವರು ತಲೆಮರೆಸಿ
ಕೊಂಡಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದೆ, ಅವರು ಪುದುಚೇರಿಯಲ್ಲಿದ್ದಾರೆ ಎನ್ನುವ ಮಾಹಿತಿ ಇದೆ. ವಿಶೇಷ ತನಿಖಾ ತಂಡ ರಚಿಸಿ ಬಂಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

ಅರ್ಜಿದಾರರ ಪರ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿದರು.

ಪ್ರಕರಣವೇನು?: ‘ವಕೀಲೆ ಧರಣಿ ಅವರು 2018ರ ಡಿಸೆಂಬರ್‌ 31ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಹದೇವ ಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !