ಮೈತ್ರಿ ಅಭ್ಯರ್ಥಿಗೆ ಬೆಂಬಲ: ಕಾಮರಾಜು

ಸೋಮವಾರ, ಏಪ್ರಿಲ್ 22, 2019
31 °C

ಮೈತ್ರಿ ಅಭ್ಯರ್ಥಿಗೆ ಬೆಂಬಲ: ಕಾಮರಾಜು

Published:
Updated:
Prajavani

ಚಾಮರಾಜನಗರ: ‘ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ಕಾಂಗ್ರೆಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಮೈತ್ರಿ ಅಭ್ಯರ್ಥಿ ಆರ್.ಧ್ರುವನಾರಾಯಣ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕಾಮರಾಜು ಅವರು ಹೇಳಿದರು.

‘28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಜಿಲ್ಲೆ ಹಾಗೂ ತಾಲ್ಲೂಕಿನ ಎಲ್ಲ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಧ್ರುವನಾರಾಯಣ ಪರವಾಗಿ ಪ್ರಚಾರ ಮಾಡಬೇಕು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. 

‘ಮೈತ್ರಿ ಅಭ್ಯರ್ಥಿಯನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶ್ರಮವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ, ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು. ಕ್ಷೇತ್ರ ವ್ಯಾಪ್ತಿ ಎಲ್ಲ ಗ್ರಾಮಗಳಿಗೆ ತೆರಳಿ ಅಭ್ಯರ್ಥಿ ಪರ ಮತ ಯಾಚನೆ ಮಾಡಬೇಕು’ ಎಂದು ಹೇಳಿದರು.

ಮುಖಂಡ ಶಿವಮಲ್ಲು ಮಾತನಾಡಿ, ‘ಮೈತ್ರಿ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿ ಸಂವಿಧಾನ ವಿರೋಧಿ ಕೋಮುವಾದಿ ಪಕ್ಷವನ್ನು ವಿರೋಧಿಸಬೇಕು. ಮೈತ್ರಿ ಪಕ್ಷಗಳ ಅಭ್ಯರ್ಥಿ ಧ್ರುವನಾರಾಯಣ ಅವರನ್ನು ಒಮ್ಮತದಿಂದ ಬೆಂಬಲಿಸಬೇಕು. ಅವರ ಸಾಧನೆ, ಅಭಿವೃದ್ಧಿ ಕೆಲಸಗಳನ್ನು ಮತದಾರರಿಗೆ ತಿಳಿಸುತ್ತಾ ಹೆಚ್ಚಿನ ಮತಗಳಿಕೆಯ ವಾತಾವರಣ ಸೃಷ್ಟಿಸಿಕೊಡಬೇಕು’ ಎಂದು ಮನವಿ ಮಾಡಿದರು.

 ಮುಖಂಡರಾದ ಜೂಲಿಯಾನ ವಿಲಿಯಂ, ಮಹೇಶ್‌ ಗೌಡ್ರು, ಅಝಿಕ್‌ ಅಹಮದ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !