ಸುಳ್ವಾಡಿಗೆ ಮಠಾಧೀಶರು, ಬೌದ್ಧ ಭಿಕ್ಕುಗಳ ಭೇಟಿ ನಾಳೆ

7

ಸುಳ್ವಾಡಿಗೆ ಮಠಾಧೀಶರು, ಬೌದ್ಧ ಭಿಕ್ಕುಗಳ ಭೇಟಿ ನಾಳೆ

Published:
Updated:

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ‘ವಿಷ ಪ್ರಸಾದ’ ಸೇವಿಸಿ ಮೃತಪಟ್ಟವರ ಹಾಗೂ ಅಸ್ವಸ್ಥಗೊಂಡವರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಜನವರಿ 4ರಂದು ಪ್ರಗತಿಪರ ಮಠಾಧೀಶರು, ಬೌದ್ಧ ಭಿಕ್ಕುಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಅವರನ್ನು ಭೇಟಿ ಮಾಡಲಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಗೆ ಕೊಳ್ಳೇಗಾಲ ತಾಲ್ಲೂಕು ಪ್ರವಾಸಿ ಮಂದಿರದಿಂದ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ್‌ ಸ್ವಾಮೀಜಿ, ಚಿತ್ರದುರ್ಗದ ಛಲವಾದಿ ಮಹಾಸಂಸ್ಥಾನ ಗುರುಪೀಠದ ಬಸವ ನಾಗೀದೇವ ಶರಣರು, ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ  ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಚಿತ್ರದುರ್ಗದ ಹರಳಯ್ಯ ಗುರುಪೀಠದ ಬಸವಹರಳಯ್ಯ ಸ್ವಾಮೀಜಿ, ಮಹಾಬೋಧಿ ಮಿಷನ್‌ನ ಗುರು ಬುದ್ಧ ಪ್ರಕಾಶ್‌ ಭಂತೇಜಿ, ತಿ. ನರಸೀಪುರದ ನಳಂದ ಬೌದ್ಧವಿಹಾರದ ಬೋಧಿರತ್ನ ಭಂತೇಜಿ , ದಲಿತ ಸಂಘರ್ಷ ಸಮತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ್‌, ಮಾವಳ್ಳಿ ಶಂಕರ್‌ ಸೇರಿದಂತೆ ಜಿಲ್ಲೆಯ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ಮುಖಂಡರು ಬಿದರಳ್ಳಿ, ಸುಳ್ವಾಡಿ ಇತರೆ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಆಲೂರು ನಾಗೇಂದ್ರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !