ಸಿಡ್ನಿ: ಗುಂಡಿನ ದಾಳಿಗೆ ಐವರ ಸಾವು

ಶುಕ್ರವಾರ, ಜೂನ್ 21, 2019
24 °C

ಸಿಡ್ನಿ: ಗುಂಡಿನ ದಾಳಿಗೆ ಐವರ ಸಾವು

Published:
Updated:

ಸಿಡ್ನಿ: ಬಂದೂಕುಧಾರಿಯೊಬ್ಬ ಮಂಗಳವಾರ ಮಧ್ಯಾಹ್ನ ಗುಂಡು ಹಾರಿಸಿದ ಪರಿಣಾಮ ಐವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಡಾರ್ವಿನ್‌ ನಗರದ ಕೇಂದ್ರ ಭಾಗದಲ್ಲಿ ಗುಂಡು ಹಾರಿಸಿದ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಗುಂಡಿನ ದಾಳಿ ಪ್ರಮಾಣ ಕಡಿಮೆಯಾಗಿದೆ ಎಂದಿರುವ ಉತ್ತರ ಪ್ರಾಂತ್ಯದ ಪೊಲೀಸ್‌ ವರಿಷ್ಠಾಧಿಕಾರಿ ಗಾವಿನ್‌ ಕೆನಡಿ, ಪೊಲೀಸರು ಐದು ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಇದು ಉಗ್ರರ ಕೃತ್ಯ ಅಲ್ಲ ಎಂದು ಪ್ರಧಾನಿ ಸ್ಕೂಟ್‌ ಮೊರಿಸನ್‌ ಪ್ರತಿಕ್ರಿಯಿಸಿದ್ದಾರೆ. ಶಾರ್ಟ್‌ ಗನ್ ಹಿಡಿದ ವ್ಯಕ್ತಿಯೊಬ್ಬ ಡಾರ್ವಿನ್‌ ಹೊಟೇಲ್‌ಗೆ ನುಗ್ಗಿ ದಾಳಿ ನಡೆಸಿದ ಎಂದು ಎಬಿಸಿ ವಾಹಿನಿಗೆ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !