‘ಮೈಲಾರಿ ಅಗ್ರೋ ಪ್ರೊಡಕ್ಟ್’ ವ್ಯವಸ್ಥಾಪಕ ನಿರ್ದೇಶಕ ಬಂಧನ
ಬೆಂಗಳೂರು: ಅಧಿಕ ಬಡ್ಡಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು, ‘ಮೈಲಾರಿ ಅಗ್ರೋ ಪ್ರೊಡಕ್ಟ್’ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ (42) ಅವರನ್ನು ಬಂಧಿಸಿದ್ದಾರೆ.ಹಣ ಹೂಡಿಕೆ ಮಾಡಿ ವಂಚನೆಗೀಡಾಗಿದ್ದ ಜೆ.ಪಿ. ನಗರದ ಮಹೇಶ್ ಎಂಬುವರು ದೂರು ನೀಡಿದ್ದರು. ಅದರನ್ವಯ ಭರತ್, ಮಹೇಶ್, ಪ್ರಕಾಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.Last Updated 27 ಜೂನ್ 2021, 7:01 IST