ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದು, ಶರಣಾಗಲು 'ಸುಪ್ರೀಂ' ಆದೇಶ
ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದು ಪಡಿಸಿದೆ. ಜಾಮೀನು ರದ್ದು ಪಡಿಸುವ ಜೊತೆಗೆ ಒಂದು ವಾರದೊಳಗೆ ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು ತೀರ್ಪು ಪ್ರಕಟಿಸಿದೆ.Last Updated 18 ಏಪ್ರಿಲ್ 2022, 6:46 IST