ಬೆಂಗಳೂರು ವಿವಿ ನಿರ್ದೇಶಕರು, ವಿಶೇಷ ಅಧಿಕಾರಿಗಳು, ಸಮನ್ವಯಾಧಿಕಾರಿಗಳ ಬದಲಾವಣೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವಿವಿಧ ವಿಭಾಗಗಳ ನಿರ್ದೇಶಕರು, ವಿಶೇಷ ಅಧಿಕಾರಿಗಳು ಮತ್ತು ಸಮನ್ವಯಾಧಿಕಾರಿಗಳನ್ನು ಬದಲಾಯಿಸಲಾಗಿದೆ.
ಮಂಗಳವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ವಿಭಾಗಗಳಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಿರ್ದೇಶಕರು, ಸಮನ್ವಯಾಧಿಕಾರಿ ಮತ್ತು ವಿಶೇಷಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಸದ್ಯ ಈ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಹೊಸಬರಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದು ಕುಲಸಚಿವರು ಸೂಚಿಸಿದ್ದಾರೆ.Last Updated 25 ಜನವರಿ 2023, 21:07 IST