ಕಾಫಿ ಡೇ ಹಗರಣ: ತ್ವರಿತ ತನಿಖೆಗೆ ತನಿಖಾ ಸಂಸ್ಥೆಗಳಿಗೆ ಎಸ್.ಆರ್. ಹಿರೇಮಠ ಪತ್ರ
ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಮೊತ್ತದ ಹಗರಣದ ಕುರಿತು ತ್ವರಿತವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಅವರು ವಿವಿಧ ತನಿಖಾ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ.ಸಿಬಿಐ, ಜಾರಿ ನಿರ್ದೇಶನಾಲಯ, ಗಂಭೀರ ವಂಚನೆ ಪ್ರಕರಣಗಳ ತನಿಖಾ ಸಂಸ್ಥೆ (ಎಸ್ ಎಫ್ಐಒ), ಸೆಬಿ, ಕಪ್ಪು ಹಣ ಕುರಿತ ವಿಶೇಷ ತನಿಖಾ ತಂಡ (ಎಸ್ ಐಟಿ), ಲೋಕಪಾಲ, ಕೇಂದ್ರೀಯ ವಿಚಕ್ಷಣ ದಳ (ಸಿವಿಸಿ), ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರೀಯ ನೇರ ತೆರಿಗೆ ಮಂಡಳಿಗೆ ನವೆಂಬರ್ 25ರಂದು ಪತ್ರ ಬರೆದಿದ್ದಾರೆ.Last Updated 22 ಡಿಸೆಂಬರ್ 2020, 8:56 IST