ಮಳವಳ್ಳಿ: ದಾಸನದೊಡ್ಡಿಯ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಇನ್ನಿಲ್ಲ
ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು. ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.Last Updated 17 ಅಕ್ಟೋಬರ್ 2022, 2:58 IST