ನನ್ನ ಫೋನ್ ಹ್ಯಾಕ್ ಆಗಿದೆ, ಸನ್ನಿವೇಶವು ತುರ್ತು ಪರಿಸ್ಥಿತಿಗಿಂತಲೂ ಗಂಭೀರ: ಮಮತಾ
ನವದೆಹಲಿ: ಪೆಗಾಸಸ್ ಗೂಢಚರ್ಯೆಗೆ ಸಂಬಂಧಿಸಿದಂತೆ ಮತ್ತೆ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈಗಿನ ಸನ್ನಿವೇಶವು ತುರ್ತು ಪರಿಸ್ಥಿತಿಯ ಸಂದರ್ಭಕ್ಕಿಂತಲೂ ಗಂಭೀರವಾಗಿದೆ ಎಂದು ಆರೋಪಿಸಿದ್ದಾರೆ. ಬುಧವಾರ ದೆಹಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, 'ಬದುಕು, ಸಂಪತ್ತು ಹಾಗೂ ಸುರಕ್ಷತೆಯನ್ನು ಒಳಗೊಂಡಿರುವ ಈ ವಿಚಾರವು (ಪೆಗಾಸಸ್) ಗಂಭೀರವಾದುದಾಗಿದೆ' ಎಂದರು.Last Updated 28 ಜುಲೈ 2021, 10:47 IST