ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ: ವರದಿ ಸಲ್ಲಿಸಲು ಬಿಬಿಎಂಪಿಗೆ ನಿರ್ದೇಶನ
ಬೆಂಗಳೂರು: ’ಜಯನಗರ ಸುತ್ತಮುತ್ತಲ ಪ್ರದೇಶದ ಪಾದಚಾರಿ ಮಾರ್ಗಗಳಲ್ಲಿ ನಿಲುಗಡೆ ಮಾಡಲಾಗುವ ವಾಹನಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸಿ‘ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತಂತೆ ‘ಲೆಟ್ಜ್ ಕಿಟ್ ಫೌಂಡೇಷನ್‘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್, ’ಬಿಬಿಎಂಪಿ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ‘ ಎಂದು ಆಕ್ಷೇಪಿಸಿದರು.Last Updated 5 ಅಕ್ಟೋಬರ್ 2021, 20:09 IST