ಅವಿಭಜಿತ ದ.ಕ. ಜಿಲ್ಲೆಯಲ್ಲಿ 13 ಸ್ಥಾನ ಗೆಲ್ಲಲಿದೆ ಕಾಂಗ್ರೆಸ್:ಎಂ.ಬಿ.ಪಾಟೀಲ
‘ಜಾತಿ, ಧರ್ಮದ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ, ಪುಲ್ವಾಮ ಮತ್ತು ಬಾಲಾಕೋಟ್ ದಾಳಿಗಳನ್ನು ಮುಂದಿಟ್ಟುಕೊಂಡು ಜನರ ಭಾವನೆ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಜನರ ಬದುಕನ್ನು ಕಟ್ಟುವ ಕಾರ್ಯವನ್ನು ಯಾವತ್ತೂ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯವನ್ನು ಸ್ವಾರ್ಥ ರಾಜಕಾರಣಕ್ಕಾಗಿ ಹಾಳು ಮಾಡುತ್ತಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ 13 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.Last Updated 26 ಸೆಪ್ಟೆಂಬರ್ 2022, 14:17 IST