ಮೈಸೂರಿಗೆ ಆಗಮಿಸಿದ ಮೋದಿ, ನಾಳೆ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ
ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅವರು, ರಾತ್ರಿ 9.25ಕ್ಕೆ ವಿಮಾನನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು. ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್, ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿಕುಮಾರ್ ಚೌಬೆ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಜನಪ್ರತಿನಿಧಿಗಳು ಇದ್ದರು. ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಜನಪ್ರತಿನಿಧಿಗಳಿಗೆ ಹಾಗೂ ಸ್ಥಳೀಯ ಬಿಜೆಪಿ ಪದಾಧಿಕಾರಿಗಳು ಮತ್ತು ನಾಯಕರಿಗೆ ಸ್ವಾಗತಿಸುವ ಅವಕಾಶ ದೊರೆಯಲಿಲ್ಲ.Last Updated 8 ಏಪ್ರಿಲ್ 2023, 16:36 IST