ಲೋಕಸಭೆ ಜತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವಂತೆ ಅಮಿತ್ ಶಾ ಪತ್ರ
ನವದೆಹಲಿ:2019ರ ಲೋಕಸಭೆ ಚುನಾವಣೆ ಜತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾನೂನು ಆಯೋಗಕ್ಕೆ ಸಲಹೆ ನೀಡಿ 8 ಪುಟಗಳ ಪತ್ರ ಬರೆದಿದ್ದಾರೆ.
ಏಕ ಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪಕ್ಕೆ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ವಾದದಲ್ಲಿ ಯಾವುದೇ ಹುರುಳಿಲ್ಲ, ಈ ಪಕ್ಷಗಳ ವಾದವು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.Last Updated 14 ಆಗಸ್ಟ್ 2018, 3:23 IST