ರಾಜ್‌ಕೋಟ್: ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಜಯಿಸಿರುವ ಭಾರತ ಇದೀಗ ಆಸ್ಟ್ರೇಲಿಯಾದ ಎದುರು ಚಾರಿತ್ರಿಕ 3–0 ಸರಣಿ ಜಯ ಸಾಧಿಸುವ ತವಕದಲ್ಲಿದೆ.
ಎರಡೂ ಪಂದ್ಯಗಳಲ್ಲಿ ಭಾರತ ತಂಡವನ್ನು ಕನ್ನಡಿಗ ಕೆ.ಎಲ್. ರಾಹುಲ್ ಮುನ್ನಡೆಸಿದ್ದರು. ಆಗ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸ್ಪಿನ್ನರ್ ಕುಲದೀಪ್ ಯಾದವ್ ಅವರು ತಂಡಕ್ಕೆ ಮರಳಿದ್ದಾರೆ.
ತಂಡಗಳು ಇಂತಿವೆ:
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಜಲ್‌ವುಡ್