ತಿರುವನಂತಪುರ: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ನಡುವಣ ಇಂದಿನ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.
ತಿರುವನಂತಪುರದ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಮಳೆ ಅಡಚಣೆಯಾಗಿದೆ. ಇದರಿಂದಾಗಿ ಟಾಸ್ ವಿಳಂಬವಾಗಿದೆ.
ಇದಕ್ಕೂ ಮೊದಲು ಕಳೆದ ಶನಿವಾರ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.
ಏಕದಿನ ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರಕಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಅತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯದಲ್ಲಿ ಚೆನ್ನೈಯಲ್ಲಿ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ನಿಗದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.