ಹಾಂಗ್‌ಝೌ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಕಬಡ್ಡಿ ವಿಭಾಗದಲ್ಲಿ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ಮೇಲುಗೈ ಸಾಧಿಸಿವೆ.
ದಾಖಲೆಯ ಏಳು ಬಾರಿ ಚಾಂಪಿಯನ್ ಭಾರತದ ಪುರುಷ ತಂಡವು, 'ಎ' ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 55-18ರ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಮತ್ತೊಂದೆಡೆ ಭಾರತದ ಮಹಿಳೆಯರ ತಂಡ, 'ಎ' ಗುಂಪಿನ ತನ್ನ ಎರಡನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 56-23ರ ಅಂತರದಲ್ಲಿ ಜಯಭೇರಿ ಮೊಳಗಿಸಿದೆ.
ಕಳೆದ ಬಾರಿ ಬೆಳ್ಳಿ ಜಯಿಸಿದ್ದ ಭಾರತದ ಮಹಿಳಾ ತಂಡ, ಮೊದಲ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ 34-34ರ ಅಂತರದ ಡ್ರಾ ಫಲಿತಾಂಶಕ್ಕೆ ತೃಪ್ತಿಪಟ್ಟುಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.