ವಿಧಾನಸೌಧದ ಮುಂಭಾಗದಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಬೊಮ್ಮಾಯಿ
ಬೆಂಗಳೂರು: ‘ಮೆಟ್ರೊ ಕಾಮಗಾರಿ ಕಾರಣಕ್ಕೆ ಸ್ಥಳಾಂತರಿಸಿದ್ದ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪಿಸಲು ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆ ಅಂಗವಾಗಿ ಬೋಸ್ ಪ್ರತಿಮೆಗೆ ಸೋಮವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ರಾಜ್ಯದಲ್ಲಿ ಆಗುತ್ತಿದೆ. ಕಳೆದ ಬಾರಿ 75 ಎನ್‌ಸಿಸಿ ಪಡೆಗಳನ್ನು ಅವರ ಹೆಸರಿನಲ್ಲಿ ಹೆಚ್ಚು ಮಾಡಲಾಗಿದೆ’ ಎಂದು ಅವರು ಹೇಳಿದರು.
Last Updated 23 ಜನವರಿ 2023, 20:03 IST