ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿದರೆ ಪಾಕ್‌ ಜೊತೆ ಮಾತುಕತೆ

ಸೋಮವಾರ, ಜೂನ್ 17, 2019
28 °C
ಅಮೆರಿಕದಲ್ಲಿ ಭಾರತದ ರಾಯಭಾರಿ ಶೃಂಗ್ಲಾ ಹೇಳಿಕೆ

ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿದರೆ ಪಾಕ್‌ ಜೊತೆ ಮಾತುಕತೆ

Published:
Updated:
Prajavani

ವಾಷಿಂಗ್ಟನ್‌: ‘ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುವುದನ್ನು ನಿಲ್ಲಿಸದ ಹೊರತು ಆ ದೇಶದೊಂದಿಗೆ ಭಾರತ ಮಾತುಕತೆ ನಡೆಸುವುದಿಲ್ಲ’ ಎಂದು ಅಮೆರಿಕದಲ್ಲಿ ಭಾರತದ ರಾಯಬಾರಿ ಹರ್ಷವರ್ಧನ್‌ ಶೃಂಗ್ಲಾ ಹೇಳಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪುನರಾಯ್ಕೆಗೊಂಡ ಬೆನ್ನಲ್ಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಉಭಯ ದೇಶಗಳ ನಡುವಿನ ಸಂಬಂಧ ಸುಧಾರಿಸಲು ಶಾಂತಿ ಮಾತುಕತೆಗೆ ಚಾಲನೆ ನೀಡುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ’ ಎಂದರು.

‘ಭಯೋತ್ಪಾದನೆಯನ್ನು ಬೆಂಬಲಿಸುವುದೇ ತನ್ನ ನೀತಿಯನ್ನಾಗಿ ದೇಶವೊಂದು ಬಳಸುವುದು ಹಾಗೂ ಭಾರತ ಇಂತಹ ಕುಟಿಲ ನೀತಿಗೆ ತುತ್ತಾಗುವುದು ಎಲ್ಲಿಯವರೆಗೆ ನಡೆಯುತ್ತದೆಯೋ ಅಲ್ಲಿಯವರೆಗೆ ಆ ದೇಶದೊಂದಿಗೆ ಮಾತುಕತೆ ನಡೆಸಲು ಭಾರತದಲ್ಲಿ ಅಧಿಕಾರಕ್ಕೆ ಬರುವ ಯಾವ ಸರ್ಕಾರವೂ ಮುಂದಾಗದು’ ಎಂದು ಅವರು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಕುಟುಕಿದರು.

‘ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ಯಾವಾಗ ನಿಲ್ಲಿಸುತ್ತದೆಯೋ ಆ ದಿನವೇ ಅದರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಮುಂದಡಿ ಇಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ನೆರೆ ದೇಶಗಳಾದ ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌ ಹಾಗೂ ಅಫ್ಗಾನಿಸ್ತಾನದೊಂದಿಗೆ ಭಾರತ ಅದ್ಭುತ ಸಂಬಂಧ ಹೊಂದಿದೆ. ಇಂಥದೇ ಬಾಂಧವ್ಯ ಪಾಕಿಸ್ತಾನದೊಂದಿಗೆ ಇರಬೇಕು ಎಂಬುದು ಪ್ರತಿಯೊಬ್ಬ ಭಾರತೀಯನ ಅಪೇಕ್ಷೆಯೂ ಆಗಿದೆ’ ಎಂದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 1

  Sad
 • 1

  Frustrated
 • 1

  Angry

Comments:

0 comments

Write the first review for this !