ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

ಶುಕ್ರವಾರ, ಮೇ 24, 2019
22 °C
ವರ್ಗಾವಣೆ ಪ‍್ರಕ್ರಿಯೆ ಆರಂಭಿಸಲು ಒತ್ತಾಯ

ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

Published:
Updated:

ಬೆಂಗಳೂರು: ‘ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನುಕೂಲವಾಗುವಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು, ನಗರದ ನೃಪತುಂಗ ರಸ್ತೆಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. 

‘ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ ನೇತೃತ್ವದಲ್ಲಿ ಪ‍್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. 

‘ಮೂರು ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಅರ್ಹ ಶಿಕ್ಷಕರಿಗೆ ತೊಂದರೆ ಆಗಿದೆ. ವರ್ಗಾವಣೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಹಾಗೂ ಗೊಂದಲಗಳು ನಿವಾರಣೆ ಆಗಿದ್ದರೂ ಪ್ರಕ್ರಿಯೆ ಮಾತ್ರ ಆರಂಭವಾಗಿಲ್ಲ. ಶಿಕ್ಷಣ ಇಲಾಖೆಯು ಆದಷ್ಟು ಬೇಗನೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಶಿಕ್ಷಕರ ಸಂಘದ ವಿ.ಎಂ.ನಾರಾಯಣಸ್ವಾಮಿ, ‘ನಗರ ಹಾಗೂ ಗ್ರಾಮಾಂತರ ಪ್ರದೇಶದ ಶಿಕ್ಷಕರ ವರ್ಗಾವಣೆ ಸಂಬಂಧ ಮೂರು ವರ್ಷಗಳ ಹಿಂದೆಯೇ ಆದೇಶವಾಗಿದ್ದು, ಇದುವರೆಗೂ ಆದೇಶ ಜಾರಿಗೆ ಬಂದಿಲ್ಲ. ಅದರಿಂದಾಗಿ ಸಾಕಷ್ಟು ಶಿಕ್ಷಕರಿಗೆ ಅನ್ಯಾಯವಾಗಿದೆ’ ಎಂದು ದೂರಿದರು.

ಮನವಿ ಸಲ್ಲಿಕೆ: ಪ್ರತಿಭಟನಾಕಾರರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಸಿ.ಜಾಫರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ರವಾನಿಸಿದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !