ಬೆಂಗಳೂರು: ಏಸರ್ ಇಂಕ್ ಸಮೂಹ ಸಂಸ್ಥೆಯು ಮೇಕ್ಇನ್ ಇಂಡಿಯಾದ ಎಐ ಸರ್ವರ್ ಅನ್ನು ಬಿಡುಗಡೆ ಮಾಡಿದೆ. ಇದು ದೇಶದಲ್ಲಿ ಅತ್ಯುತ್ತಮವಾದ ಎಐ ಮತ್ತು ಡೇಟಾ ಸೆಂಟರ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಏಸರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕೊಹ್ಲಿ, ‘ದೇಶವು ಈಗ ಪರಿವರ್ತನೆಯ ಎಐ ಯುಗದ ಹೊಸ್ತಿಲಲ್ಲಿ ನಿಂತಿದೆ. ಶಕ್ತಿಯುತವಾದ ಡಿಜಿಟಲ್ ಮೂಲಸೌಲಭ್ಯ ಉದ್ಯಮಗಳಿಗೆ ಬೆನ್ನೆಲುಬಾಗಿದೆ. ಭಾರತದ ಮಾರುಕಟ್ಟೆಗೆ ಕೃತಕ ಬುದ್ಧಿಮತ್ತೆಯನ್ನು ಪರಿಚಯಿಸಲು ಹಾಗೂ ಮಾರುಕಟ್ಟೆ ವಿಸ್ತರಣೆಗೆ ಇದು ನೆರವಾಗಲಿದೆ ಎಂದರು.

ಕೃತಕ ಬುದ್ಧಿಮತ್ತೆಯ ನಾವೀನ್ಯತೆ ಮತ್ತು ಡಿಜಿಟಲ್ ಕ್ಷೇತ್ರಕ್ಕೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಸೃಷ್ಟಿಸಲು ಸ್ಥಳೀಯವಾಗಿ ಸರ್ವರ್ಗಳನ್ನು ತಯಾರಿಸಲಾಗುತ್ತಿದೆ. ಸಂಶೋಧನೆ, ಉತ್ಪಾದನೆ, ಆರೋಗ್ಯ, ರಕ್ಷಣೆ ಇತ್ಯಾದಿ ಕ್ಷೇತ್ರಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-4-879032799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.