ಹುಬ್ಬಳ್ಳಿ: ‘ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದೆ. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಪ್ರತಿಯೊಬ್ಬರೂ ತಾಂತ್ರಿಕ ಮತ್ತು ಸೃಜನಾತ್ಮಕ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಇಸ್ತ್ರೋ ಮಾಜಿ ಅಧ್ಯಕ್ಷ ಡಾ.ಕಿರಣ್ಕುಮಾರ್ ಹೇಳಿದರು.

ಇಲ್ಲಿನ ವಿದ್ಯಾನಗರದ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್.ಪಾಟೀಲ ಕಾಲೇಜಿನ ಆವರಣದಲ್ಲಿ ಭಾನುವಾರ ನೂತನ ಎಂಜಿನಿಯರಿಂಗ್ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಇದು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಯುಗ. ತಂತ್ರಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಮತ್ತು ವೃತ್ತಿ ಜೀವನವನ್ನು ಉನ್ನತ ಹಂತಕ್ಕೆ ಕೊಂಡೊಯ್ಯಲು ನಿರಂತರ ಕೌಶಲ ವೃದ್ಧಿ ಅತ್ಯಗತ್ಯ, ಅನಿವಾರ್ಯವೂ ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಪ್ರಮುಖ ತಾಂತ್ರಿಕ ಕೌಶಲ ಮತ್ತು ಕಲಿಕಾ ಸಂಪನ್ಮೂಲಗಳ ಬಗ್ಗೆ ಹೆಚ್ಚು ತಿಳಿವಳಿಕೆ ಹೊಂದಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅವಿಷ್ಕಾರ ಮತ್ತು ನವ ಪರಿಕರಗಳನ್ನು ಬಳಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವ ಕುರಿತು ಹೆಚ್ಚು ತಿಳಿವಳಿಕೆ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಚಟುವಟಿಕೆಗಳೂ ನಡೆಯಬೇಕಿದೆ’ ಎಂದರು.

‘ಎಂಜಿನಿಯರಿಂಗ್ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿಯೂ ಸ್ಪರ್ಧೆ ಇದೆ. ಅವಿಷ್ಕಾರ ಹಾಗೂ ತಾಂತ್ರಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ಅದಕ್ಕೆ ತಕ್ಕಂತೆ ನಾವು ಹೊಂದಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನೂತನ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಮೇಶ ಜಂಗಲ್ ಅವರು, ‘ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಫ್ಯೂಚರ್ ಫೋರ್ಸ್ ಎಂಜಿನಿಯರಿಂಗ್ ಅಕಾಡೆಮಿ ಆರಂಭಿಸಲಾಗಿದೆ. ಡಾ.ಕಿರಣ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ನಡೆಸಲಾಯಿತು. ಎಂಜಿನಿಯರಿಂಗ್ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು’ ಎಂದರು.

ಇಸ್ತ್ರೋದ ನಿವೃತ್ತ ವಿಜ್ಞಾನಿ ಡಾ.ಆರ್.ವಿ.ನಾಡಗೌಡರ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-24-1583088982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.