ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Itel S24 | ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಐಟೆಲ್‌

Published 23 ಏಪ್ರಿಲ್ 2024, 11:29 IST
Last Updated 23 ಏಪ್ರಿಲ್ 2024, 11:29 IST
ಅಕ್ಷರ ಗಾತ್ರ

ನವದೆಹಲಿ: ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್‌(itel) ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ S24 ಅನ್ನು ಬಿಡುಗಡೆ ಮಾಡಿದೆ.

ಈ ಸ್ಮಾರ್ಟ್‌ ಫೋನ್‌ 90Hz 6.6 ಇಂಚಿನ HD+ ಪಂಚ್-ಹೋಲ್ ಡಿಸ್‌ಪ್ಲೇಯನ್ನು ಹೊಂದಿದ್ದು, ಉತ್ತಮ ಕ್ಯಾಮರಾ, ದೀರ್ಘ ಬಾಳಿಕೆಯ ಬ್ಯಾಟರಿ ಸೇರಿದಂತೆ ಹಲವು ಆಕರ್ಷಕ ಫೀಚರ್‌ಗಳನ್ನು ಒಳಗೊಂಡಿರಲಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡು ಬಣ್ಣಗಳಲ್ಲಿ ಲಭ್ಯವಿರುವ ಈ ಫೋನ್‌ನ ಹಿಂಬದಿ ಕ್ಯಾಮರಾ 180MP(ಡ್ಯುಯಲ್ ಕ್ಯಾಮರಾ) ಹಾಗೂ ಸೆಲ್ಫಿ ಕ್ಯಾಮರಾ 8MP ಇದೆ. 5000mAH ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸಾಮರ್ಥ್ಯ ಹೊಂದಿದೆ. S24 ಮೊಬೈಲ್‌ 16GB* RAM (through memory fusion) + 128GB ROM ಸೌಲಭ್ಯ ಹೊಂದಿದೆ.

ಹೊಸ ಸ್ಮಾರ್ಟ್‌ಫೋನ್‌ನ ಬೆಲೆ ₹9,999 ಇದ್ದು, ಸದ್ಯ ಅಮೆಜಾನ್‌ನಲ್ಲಿ ಲಭ್ಯವಿದೆ. ಸ್ಮಾರ್ಟ್‌ಫೋನ್‌ ಜೊತೆಗೆ ಸ್ಮಾರ್ಟ್‌ ವಾಚ್‌ ಅನ್ನು ಉಡುಗೊರೆಯಾಗಿ ಸಿಗಲಿದೆ. ಏಪ್ರಿಲ್ ಕೊನೆಯ ವಾರ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT