ಸೋಮವಾರ, ಅಕ್ಟೋಬರ್ 18, 2021
27 °C

ಅತಿ ಕಡಿಮೆ ಬೆಲೆಯ ಜಿಯೋ ಫೋನ್ ನೆಕ್ಸ್ಟ್: ಮುಂದಿನ ವಾರ ಪ್ರೀ ಬುಕ್ಕಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೂಗಲ್ ಸಹಯೋಗದಲ್ಲಿ ರಿಲಯನ್ಸ್ ಕಂಪನಿ ಅತೀ ಕಡಿಮೆ ಬೆಲೆಗೆ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಹೊರತರುತ್ತಿದ್ದು, ಬರುವ ಗಣೇಶ ಹಬ್ಬಕ್ಕೆ ಬಿಡುಗಡೆ ಮಾಡುವುದಾಗಿ ಕಂಪನಿ ತಿಳಿಸಿದೆ. 

ಕಡಿಮೆ ಬೆಲೆಯ ಈ ಫೋನ್‌ಗೆ ಜಿಯೋ ನೆಕ್ಸ್ಟ್ ಎಂದು ಹೆಸರಿಡಲಾಗಿದೆ. ಮುಂದಿನ ವಾರ ಪ್ರೀ ಬುಕ್ಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಈ ಸ್ಮಾರ್ಟ್‌ಫೋನಿನ ಯಾವುದೇ ವಿಶೇಷತೆಗಳನ್ನು ಜಿಯೊ ಇನ್ನು ಬಹಿರಂಗಪಡಿಸಿಲ್ಲ. ಆದಾಗ್ಯೂ ಒಂದಷ್ಟು ಮಾಹಿತಿಗಳು ಇಂಟರ್‌ನೆಟ್‌ನಲ್ಲಿ ಸೋರಿಕೆಯಾಗಿವೆ.

ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 11 ಆವೃತ್ತಿಯಲ್ಲಿ ಲಭ್ಯವಿದ್ದು, 2 ಜಿಬಿ ಮತ್ತು 3 ಜಿಬಿ RAM ಗಳಲ್ಲಿ ಇರಲಿದೆ.  16 ಜಿಬಿ ಮತ್ತು 32 ಜಿಬಿ ಸ್ಟೊರೇಜ್,  5.5-ಇಂಚಿನ ಡಿಸ್‌ಪ್ಲೇ, 2500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. 

ಇದರಲ್ಲಿ 13 ಮೆಗಾಪಿಕ್ಸೆಲ್ ಮತ್ತು 8 ಮೆಗಾಪಿಕ್ಸೆಲ್‌ ಮಾದರಿಯ ಎರಡು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರ ಬೆಲೆ ಕೇವಲ ₹3,499 ಎಂಬ ಮಾಹಿತಿ ಕೂಡ ಸೋರಿಕೆಯಾಗಿದೆ.

ಮುಂದಿನ ವಾರದಲ್ಲಿ ಕಂಪನಿಯು ಅಧಿಕೃತವಾಗಿ ಫೋನಿನ ವಿಶೇಷತೆ, ಬೆಲೆ ಮತ್ತು ವೈಶಿಷ್ಟ್ಯಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು