ಸೋಮವಾರದಿಂದ ಗುರವಾರದವರೆಗೆ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (ಎಂಡ್ಬ್ಲ್ಯುಸಿ) ನಡೆಯಲಿದ್ದು, ಅದಕ್ಕೂ ಮೊದಲೇ ಕಂಪನಿಯು ತನ್ನ ಬ್ರ್ಯಾಂಡ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. ಸೇವೆಗಳನ್ನು ಪೂರೈಸುವ ವಹಿವಾಟಿನತ್ತ ಕಂಪನಿ ಗಮನ ಮುಂದುವರಿಸಲಿದ್ದು, ದೂರಸಂಪರ್ಕ ಕಂಪನಿಗಳಿಗೆ ಅಗತ್ಯ ಸಾಧನಗಳನ್ನು ನೀಡುವುದು, ಅದರಲ್ಲಿಯೂ ಮುಖ್ಯವಾಗಿ ಬೇರೆ ಉದ್ದಿಮೆಗಳಿಗೆ ಟೆಲಿಕಾಂ ಗಿಯರ್ ಮಾರಾಟ ಮಾಡಲು ಹೆಚ್ಚು ಗಮನ ಹರಿಸಲು ನಿರ್ಧರಿಸಿದೆ.