ಬುಧವಾರ, ಸೆಪ್ಟೆಂಬರ್ 23, 2020
20 °C

ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌: ‘ರಿಯಲ್‌ಮಿ’ ಅತಿ ಹೆಚ್ಚು ಮಾರಾಟ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಫ್ಲಿಪ್‌ಕಾರ್ಟ್‌ನ ಬಿಗ್‌ ಬಿಲಿಯನ್‌ ಡೇಸ್‌ನಲ್ಲಿ ಅತಿ ಹೆಚ್ಚು ಮಾರಾಟ ಕಂಡಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವುದಾಗಿ ರಿಯಲ್‌ಮಿ ಕಂಪನಿ ಹೇಳಿಕೊಂಡಿದೆ.

ಸೆಪ್ಟೆಂಬರ್‌ 30 ರಿಂದ ಅಕ್ಟೋಬರ್‌ 4ರವರೆಗೆ ಒಟ್ಟಾರೆ 22 ಲಕ್ಷ ಮೊಬೈಲ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಅತಿ ಹೆಚ್ಚಿನ ಸ್ಮಾರ್ಟ್‌ಫೋನ್‌ ಮಾರಾಟ ಮಾಡಿರುವ ಬ್ರ್ಯಾಂಡ್‌ ಆಗಿದೆ ಎಂದು ರಿಯಲ್‌ಮಿ ತಿಳಿಸಿದೆ.

ಇದನ್ನೂ ಓದಿ: ಹಬ್ಬದ ಉತ್ಸವ; ದಾಖಲೆ ವಹಿವಾಟು: ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗ್ರಾಹಕರು ಹೆಚ್ಚಳ

ವಿವಿಧ ರೀತಿಯ ರಿಯಾಯ್ತಿ ಕೊಡುಗೆಗಳಲ್ಲದೆ, ಕಡಿಮೆ ಬೆಲೆಗೆ ರಿಯಲ್‌ಮಿ ಸಿ2, ರಿಯಲ್‌ಮಿ 5 ಮತ್ತು ರಿಯಲ್‌ಮಿ 3 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಗೆ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದೆ. 

ಅತಿ ಕಡಿಮೆ ಸಮಯದಲ್ಲಿ ಈ ಸಾಧನೆ ಮಾಡಲಾಗಿದೆ. ಗುಣಮಟ್ಟ ಮತ್ತು ಬೆಲೆಯ ದೃಷ್ಟಿಯಿಂದ ಗ್ರಾಹಕರ ಆದ್ಯತೆಯ ಮೊಬೈಲ್‌ ಫೋನ್‌ ಬ್ರ್ಯಾಂಡ್‌ ಆಗಿ ಹೊರಹೊಮ್ಮಿದೆ’ ಎಂದು ರಿಯಲ್‌ಮಿ ಇಂಡಿಯಾದ ಸಿಇಒ ಮಾಧವ್‌ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು