ಭಾನುವಾರ, ಮೇ 29, 2022
30 °C

ಫೆಬ್ರುವರಿಯಲ್ಲಿ ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ ನೋಟ್ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Samsung Galaxy S22 Ultra teaser. Credit: Samsung

ಬೆಂಗಳೂರು: ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಸ್ಯಾಮ್‌ಸಂಗ್, ಫೆಬ್ರುವರಿಯಲ್ಲಿ ನೂತನ ಗ್ಯಾಲಕ್ಸಿ ನೋಟ್ ಬಿಡುಗಡೆ ಮಾಡಲು ಮುಂದಾಗಿದೆ.

ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಈವೆಂಟ್ ಫೆಬ್ರುವರಿಯಲ್ಲಿ ನಡೆಯಲಿದೆ ಎಂದು ಸ್ಯಾಮ್‌ಸಂಗ್ ಶುಕ್ರವಾರ ಘೋಷಿಸಿದೆ.

ದಿನಾಂಕವನ್ನು ಸ್ಯಾಮ್‌ಸಂಗ್ ಘೋಷಿಸಿಲ್ಲವಾದರೂ, ಹೊಸ ಪ್ರೀಮಿಯಂ ಎಸ್ ಸರಣಿಯಲ್ಲಿ ನೂತನ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ ಎಸ್‌22 ಬಿಡುಗಡೆಯಾಗುವ ನಿರೀಕ್ಷೆಯಿದೆ.

ನೂತನ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಿಸುತ್ತಿರುವ ಕುರಿತು ಸ್ಯಾಮ್‌ಸಂಗ್ ಟೀಸರ್ ಅನ್ನು ಬಿಡುಗಡೆ ಮಾಡಿದ್ದು, ಪ್ರೀಮಿಯಂ ವಿನ್ಯಾಸದ ಗ್ಯಾಲಕ್ಸಿ ಸರಣಿ ಬರುತ್ತಿದೆ ಎಂಬ ಸುಳಿವು ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು