ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Samsung Galaxy Z Flip5 And Z Fold5: 28 ತಾಸಿನಲ್ಲಿ 1 ಲಕ್ಷ ಬುಕ್ಕಿಂಗ್!

Published 10 ಆಗಸ್ಟ್ 2023, 13:18 IST
Last Updated 10 ಆಗಸ್ಟ್ 2023, 13:18 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್‌ಸಂಗ್, ಇತ್ತೀಚೆಗಷ್ಟೇ ದೇಶದಲ್ಲಿ ಗ್ಯಾಲಕ್ಸಿ ಝಡ್ ಫ್ಲಿಪ್ 5 ಮತ್ತು ಝಡ್ ಫೋಲ್ಡ್ 5 ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆಗೊಳಿಸಿತ್ತು.

ಐದನೇ ತಲೆಮಾರಿನ ಪೋಲ್ಡಬಲ್ ಡಿವೈಸ್‌ಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಕಂಡುಬಂದಿದ್ದು, 28 ತಾಸುಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮುಂಗಡ ಬುಕ್ಕಿಂಗ್ ದಾಖಲಾಗಿದೆ.

ಇದನ್ನೂ ಓದಿ: ಗ್ಯಾಲಕ್ಸಿ ಝಡ್ ಫ್ಲಿಪ್ 5 ಮತ್ತು ಝಡ್ ಫೋಲ್ಡ್ 5

ಈ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳ ಮಾರಾಟವು ಆಗಸ್ಟ್ 18ರಿಂದ ಆರಂಭವಾಗಲಿದೆ.

ಆಕರ್ಷಕ ವಿನ್ಯಾಸ, ಕಸ್ಟಮೈಸೇಷನ್ ಆಯ್ಕೆಗಳು ಮತ್ತು ಶಕ್ತಿಯುತ ಕಾರ್ಯಕ್ಷಮತೆಯು ವಿಶಿಷ್ಟ ಅನುಭವ ನೀಡಲಿದೆ.

ಈ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು, ಐಪಿಎಕ್ಸ್ 8 ಬೆಂಬಲದಿಂದ ಹೆಚ್ಚು ಬಾಳ್ವಿಕೆ ಬರುವಂಥದ್ದಾಗಿದ್ದು, ನೀರಿನಿಂದ ರಕ್ಷಣೆ, ಆರ್ಮರ್ ಅಲ್ಯುಮಿನಿಯಂ ಫ್ರೇಮ್ಸ್ ಮತ್ತು ಹಾನಿಯಿಂದ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT