ಗುರುವಾರ , ಸೆಪ್ಟೆಂಬರ್ 23, 2021
26 °C

ಸ್ಯಾಮ್‌ಸಂಗ್ ನೂತನ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Samsung UK

ಬೆಂಗಳೂರು: ಗ್ಯಾಜೆಟ್ ಮಾರುಕಟ್ಟೆಗೆ ಸ್ಯಾಮ್‌ಸಂಗ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ.

ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸದಾಗಿ A52s 5G ಪರಿಚಯಿಸಲ್ಪಟ್ಟಿದ್ದು, ಈ ಮೊದಲು ಮಾರ್ಚ್‌ನಲ್ಲಿ ಬಿಡುಗಡೆಯಾಗಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದೆ.

ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್, ಸ್ನ್ಯಾಪ್‌ಡ್ರ್ಯಾಗನ್ 778 ಪ್ರೊಸೆಸರ್, 25W ಚಾರ್ಜಿಂಗ್ ಬೆಂಬಲ ಹೊಂದಿದೆ.

6 GB + 128 GB ಸ್ಟೋರೇಜ್ ಮಾದರಿಯಲ್ಲಿ ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಲಭ್ಯವಾಗುತ್ತಿದೆ. ಜತೆಗೆ ಓಸಮ್ ಕಪ್ಪು, ಬಿಳಿ, ನೇರಳೆ ಮತ್ತು ಮಿಂಟ್ ಬಣ್ಣದಲ್ಲಿ ದೊರೆಯಲಿದೆ.

ಯುರೋಪ್ ಮಾರುಕಟ್ಟೆಯ ಬೆಲೆಗೆ ಹೋಲಿಸಿದರೆ, ದೇಶದಲ್ಲಿ ನೂತನ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಬೆಲೆ ಅಂದಾಜು ₹41,800 ಆಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯತೆ ಮತ್ತು ಬೆಲೆ ವಿವರವನ್ನು ಕಂಪನಿ ಇನ್ನಷ್ಟೇ ಬಹಿರಂಗಪಡಿಸಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು