ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ ಬೆಲೆ ಇಳಿಕೆ

ಅಕ್ಷರ ಗಾತ್ರ

ಬೆಂಗಳೂರು: ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ದೇಶದ ಮಾರುಕಟ್ಟೆಗೆ ಇತ್ತೀಚೆಗೆ ಪರಿಚಯಿಸಿದ್ದ ನೂತನ ಸ್ಮಾರ್ಟ್‌ಫೋನ್ ಒಂದರ ಬೆಲೆ ಇಳಿಕೆ ಮಾಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸರಣಿಯಲ್ಲಿ ಬಿಡುಗಡೆಯಾಗಿದ್ದ A32 ಸ್ಮಾರ್ಟ್‌ಫೋನ್ ದರ ₹1,000 ಇಳಿಕೆಯಾಗಿದೆ.

ಕಳೆದ ಮಾರ್ಚ್‌ನಲ್ಲಿ ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಆರಂಭಿಕ ದರ ₹21,999 ಇದ್ದು, ₹1,000 ದರ ಇಳಿಕೆ ಬಳಿಕ ₹20,999ಕ್ಕೆ ಗ್ರಾಹಕರಿಗೆ ದೊರೆಯುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ನೂತನ ದರ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ.

ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್, 6 GB+128 GB ಎಂಬ ಒಂದೇ ಆವೃತ್ತಿಯಲ್ಲಿ ದೊರೆಯುತ್ತದೆ. ಕಪ್ಪು, ಬಿಳಿ, ನೀಲಿ ಮತ್ತು ನೇರಳೆ ಬಣ್ಣಗಳ ಆಯ್ಕೆ ಲಭ್ಯವಿದೆ.

ಹೊಸ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್‌ಎಚ್‌ಡಿ+ ಡಿಸ್‌ಪ್ಲೇ, ಮೀಡಿಯಾಟೆಕ್ ಹೆಲಿಯೊ G80 ಪ್ರೊಸೆಸರ್, 64+8+5+5 ಮೆಗಾಪಿಕ್ಸೆಲ್ ಹಿಂಬದಿ ಕ್ಯಾಮರಾ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT