ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಮ್‌ಸಂಗ್‌ ಗ್ಯಾಲಕ್ಸಿ: ಹೊಸ ವೈಶಿಷ್ಟ್ಯಗಳ F34 5G ಫೋನ್‌ ಬಿಡುಗಡೆಗೆ ಸಿದ್ಧತೆ

Published 1 ಆಗಸ್ಟ್ 2023, 15:33 IST
Last Updated 1 ಆಗಸ್ಟ್ 2023, 15:33 IST
ಅಕ್ಷರ ಗಾತ್ರ

ದಕ್ಷಿಣ ಕೊರಿಯಾ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ F34 5G ಮೊಬೈಲ್‌ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆಸಿದೆ. ಈ ಪೋನ್‌ ಆಗಸ್ಟ್‌ 7ರಂದು ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದೆ. 

ಈಗಾಗಲೇ ಗ್ಯಾಲಕ್ಸಿ M, A ಹಾಗೂ F ಸರಣಿಯಲ್ಲಿ ಹಲವಾರು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇದೀಗ F ಸರಣಿಯಲ್ಲಿ  F34 5G ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಲಿದೆ. ಈ ಫೋನ್‌ ಕ್ಯಾಮೆರಾ ಮತ್ತು ಬ್ಯಾಟರಿ ಬಾಳಿಕೆಯಲ್ಲಿ ಕ್ರಾಂತಿಕಾರಿ ವೈಶಿಷ್ಟ್ಯತೆ ಒಳಗೊಂಡಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಹಾಗೆಯೇ ಫೋಟೋಗ್ರಫಿಗಾಗಿ 50ಎಂಪಿ ಕ್ಯಾಮೆರಾದ OIS ಸೌಲಭ್ಯ ಹೊಂದಿರಲಿದ್ದು ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ಸೇರಿ ದೇಶಿಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ.

F34 5G ಡಿಸ್‌ಪ್ಲೇ ರಚನೆ: ಈ ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ AMOLED ಮಾದರಿಯಲ್ಲಿ ಇರಲಿದೆ. ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಲ್ಲಿದೆ.

ಪ್ರೊಸೆಸರ್‌: ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1280 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 6GB + 128GB ಸ್ಟೋರೇಜ್ ಇರಲಿದ್ದು ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಬಹುದು.

ಕ್ಯಾಮೆರಾ ರಚನೆ: ರಿಯರ್‌ ಕ್ಯಾಮೆರಾ ರಚನೆಯಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಇರಲಿದೆ. 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಒಂದೇ ಶಾಟ್‌ಗೆ 4 ವಿಡಿಯೊ, 4 ಫೋಟೊಗಳನ್ನು ಸೆರೆಹಿಡಿಯಲಿದೆ. ಶೇಕ್‌ ಆಗಿರುವ ವಿಡಿಯೊ ಮತ್ತು ಪೋಟೊಗಳನ್ನು ತೆಗೆದುಹಾಕುವ ವೈಶಿಷ್ಟ್ಯ ಹೊಂದಿದೆ. 

ಬ್ಯಾಟರಿ ಮತ್ತು ಇತರೆ ಸೌಲಭ್ಯ: 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್‌ಗೆ ಬೆಂಬಲವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಹಾಗೂ ಡಾಲ್ಬಿ ಅಟ್ಮೋಸ್ ಚಾಲಿತ ಆಡಿಯೊ ಸಾಮರ್ಥ್ಯ ಹೊಂದಿದೆ. 

ಬಳಕೆದಾರರು 5 ವರ್ಷಗಳ ವಾರೆಂಟಿ ಜೊತೆಗೆ ನೂತನ ವೈಶಿಷ್ಟ್ಯಗಳನ್ನು ಈ ಫೋನಿನಲ್ಲಿ ಆನಂದಿಸಬಹುದು ಎಂದು ಕಂಪನಿ ತಿಳಿಸಿದೆ. ಬೂದು ಮತ್ತು ಹಸಿರು ಬಣ್ಣಗಳಲ್ಲಿ ಫೋನ್‌ ಲಭ್ಯವಿದೆ. ಸುಮಾರು ₹16 ಸಾವಿರದ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT