ಶಿಕಾರಿಪುರ: ಪಟ್ಟಣದ ಮೆಸ್ಕಾಂ ಕಚೇರಿ ಎದುರು ಭಾನುವಾರ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ಲೈನ್ಮೆನ್ ಹರೀಶ್ (50) ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಸುರಿದ ಮಳೆಗೆ ನೆಲಕ್ಕುರುಳಿದ ವಿದ್ಯುತ್ ತಂತಿ ಸರಿಪಡಿಸುವ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ. ಲೈನ್ ದುರಸ್ಥಿಗೆ ಎಲ್ಸಿ ಪಡೆದಿದ್ದರೂ ಹೇಗೆ ವಿದ್ಯುತ್ ಹರಿಯಿತು ಎನ್ನುವ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹರೀಶ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕುಟುಂಬ ಸದಸ್ಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸುರಕ್ಷತಾ ಪರಿಕರಗಳನ್ನು ಬಳಸದೆ ರಿಪೇರಿ ಮಾಡಿಸಲಾಗಿದೆ. ಎಲ್ಸಿ ಪಡೆದಿದ್ದರೂ ಹೇಗೆ ವಿದ್ಯುತ್ ಹರಿದಿದೆ? ಪ್ರಕರಣದಲ್ಲಿ ಮೆಸ್ಕಾಂ ಅಧಿಕಾರಿಗಳ ನಿಲರ್ಕ್ಷ್ಯ ಎದ್ದು ಕಾಣುತ್ತಿದ್ದು, ಪತಿಯ ಸಾವಿನ ಕುರಿತು ತನಿಖೆ ನಡೆಸಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಪತ್ನಿ ರೇವತಿ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೂವರು ಹೆಣ್ಣು ಮಕ್ಕಳಿರುವ ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್ ಸಾವು ತುಂಬಲಾರದ ನಷ್ಟ ಉಂಟು ಮಾಡಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಲೈನ್ಮೆನ್ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-387472924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.