ಸಿಂಧನೂರು: ತಾಲ್ಲೂಕಿನ ಕನ್ನಾರಿ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ಗ್ರಾಮದ ಮಹಿಳೆಯರು ಶನಿವಾರ ಇಲ್ಲಿಯ ಅಬಕಾರಿ ನಿರೀಕ್ಷಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕನ್ನಾರಿಯಲ್ಲಿ ಕೆಲವು ವ್ಯಕ್ತಿಗಳು ಪರವಾನಗಿ ಇಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಸತಿ ಪ್ರದೇಶಗಳ ಸಮೀಪದಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಊರಿನ ಯುವಕರು, ಕಾರ್ಮಿಕರು, ರೈತರು ಪ್ರತಿನಿತ್ಯ ಮದ್ಯ ಸೇವಿಸುವಂತಾಗಿದೆ. ಇದರಿಂದ ಕುಟುಂಬದಲ್ಲಿ ಕಲಹ, ಸಾರ್ವಜನಿಕ ಅಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುತ್ತಿದೆ ಎಂದು ಕೆಆರ್ಎಸ್ ಮುಖಂಡ ನಿರುಪಾದಿ ಗೋಮರ್ಸಿ ದೂರಿದರು.

‘ಅಬಕಾರಿ ಇಲಾಖೆ ಅಧಿಕಾರಿಗಳು ತಕ್ಷಣ ದಾಳಿ ನಡೆಸಿ ಮದ್ಯ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಠಿಣ ಶಿಕ್ಷೆಗೆ ಒಳಪಡಿಸಿ, ಸಾರಾಯಿ ಮುಕ್ತ ಕನ್ನಾರಿ ಗ್ರಾಮ ನಿರ್ಮಾಣ ಮಾಡಬೇಕು’ ಎಂದು ಮನವಿ ಮಾಡಿದರು.

ಮದ್ಯ ನಿಷೇಧ ಆಂದೋಲನದ ಸಂಚಾಲಕಿ ವಿರುಪಮ್ಮ ಉದ್ಬಾಳ, ಸದಸ್ಯರಾದ ಮರಿಯಮ್ಮ, ಇಂದಿರಮ್ಮ, ಶಿವಮ್ಮ, ಈರಮ್ಮ, ನಿರುಪಾದಿ ಕನ್ನಾರಿ, ರೆಡ್ಡಪ್ಪ ಕನ್ನಾರಿ, ಕನ್ನಾರಿ ಗ್ರಾಮದ ಮಹಿಳೆಯರಾದ ಅಲ್ಲಬಿ, ಯಂಕಮ್ಮ, ನಾಗಮ್ಮ, ಬಸಮ್ಮ, ರುದ್ರಮ್ಮ ಹಾಗೂ ಹಂಪಮ್ಮ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-32-1220413606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.