ಶಿರಸಿ: ನಗರದ ಎಂಇಎಸ್ ಆರ್ಎನ್ಎಸ್ ಪಾಲಿಟೆಕ್ನಿಕ್ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಪ್ರವರ ಹೆಗಡೆ ತಮ್ಮ ನವೋದ್ಯಮದ ಮೂಲಕ ಅತ್ಯಾಧುನಿಕ 3ಡಿ ಪ್ರಿಂಟಿಂಗ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ, ಸರ್ಕಾರದ ಎಲಿವೇಟ್ 2025 ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ₹21 ಲಕ್ಷ ಅನುದಾನ ತಮ್ಮದಾಗಿಸಿಕೊಂಡಿದ್ದಾರೆ.

ತಮ್ಮದೇ ಆದ ಪ್ರೋಭಾರತ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಸಂಶೋಧನೆಯಲ್ಲಿ ತೊಡಗಿರುವ ಇವರು, ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಬಲ್ಲ 3ಡಿ ಪ್ರಿಂಟಿಂಗ್ ಯಂತ್ರ ಸಿದ್ಧಪಡಿಸುತ್ತಿದ್ದಾರೆ.

ಈ ಸಾಧನೆಯ ಹಿಂದೆ ಕಾಲೇಜಿನ ಇ ಅಂಡ್ ಸಿ ವಿಭಾಗದ ಉಪನ್ಯಾಸಕ ವೆಂಕಟೇಶ ಬಡಗೇರಿ ಅವರ ತಾಂತ್ರಿಕ ಮಾರ್ಗದರ್ಶನ ಹಾಗೂ ಹಿರಿಯರಾದ ನಾರಾಯಣ ಹೆಗಡೆ ಗಡಿಕೈ ಅವರ ನಿರಂತರ ಬೆಂಬಲವಿದೆ ಎಂದು ಪ್ರವರ ಹೆಗಡೆ ಸ್ಮರಿಸಿದ್ದಾರೆ. ಪ್ರೋಭಾರತ್ ಟೆಕ್ನಾಲಜೀಸ್ ಮೂಲಕ ಶಿರಸಿ ಭಾಗದಲ್ಲಿಯೇ 3ಡಿ ಪ್ರಿಂಟರ್ಗಳ ನಿರ್ಮಾಣ ಮತ್ತು ತಂತ್ರಜ್ಞಾನ ಅಭಿವೃದ್ಧಿ ಕೇಂದ್ರವಿಸ್ತರಿಸುವ ಆಶಯ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-1903113498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.