ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

TECNO Spark Go 2023 | ಬಜೆಟ್ ದರಕ್ಕೆ ಹೊಸ ಸ್ಮಾರ್ಟ್‌ಫೋನ್

ಟೆಕ್‌ನೊ ಭಾರತದ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ.
Last Updated 24 ಜನವರಿ 2023, 15:01 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಟೆಕ್‌ನೊ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳು ಟೆಕ್‌ನೊ ಸರಣಿಯ ವಿಶೇಷತೆ ಎಂದು ಕಂಪನಿ ಹೇಳಿದೆ.

ಹೊಸ ಟೆಕ್‌ನೊ ಸ್ಪಾರ್ಕ್ ಗೊ 2023 ಸ್ಮಾರ್ಟ್‌ಫೋನ್, 6.56 ಇಂಚಿನ ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ.

ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಡ್ಯುವೆಲ್ ಕ್ಯಾಮೆರಾ ಹಾಗೂ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಸ ಸ್ಮಾರ್ಟ್‌ಫೋನ್‌ನಲ್ಲಿದೆ ಎಂದು ಟೆಕ್‌ನೊ ಹೇಳಿದೆ.

3 GB RAM+ 32 GB ಸ್ಟೋರೇಜ್ ಹೊಸ ಟೆಕ್‌ನೊ ಸ್ಮಾರ್ಟ್‌ಫೋನ್‌ನಲ್ಲಿ ಇದ್ದು, ಮೀಡಿಯಾಟೆಕ್ Helio A22 2.0 GHz ಪ್ರೊಸೆಸರ್ ಇದೆ. 5000mAh ಬ್ಯಾಟರಿ ಜತೆಗೆ, 10W ಚಾರ್ಜರ್ ನೂತನ ಸ್ಮಾರ್ಟ್‌ಫೋನ್‌ ವಿಶೇಷತೆ ಎಂದು ಕಂಪನಿ ತಿಳಿಸಿದೆ.

ಭಾರತದಲ್ಲಿ ಮಾರುಕಟ್ಟೆಯಲ್ಲಿ ಹೊಸ ಟೆಕ್‌ನೊ ಸ್ಪಾರ್ಕ್ ಗೊ 2023 ಬೆಲೆ ₹6,999 ಇದೆ ಎಂದು ಟೆಕ್‌ನೊ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT